ಹೊಸದಿಗಂತ ಡಿಜಿಟಲ್ ಡೆಸ್ಕ್:
ವಂದೇ ಮೆಟ್ರೋಗೆ ‘ನಮೋ ಭಾರತ್ ರಾಪಿಡ್ ರೈಲು’ ಎಂದು ಮರುನಾಮಕರಣ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೊದಲ ರೈಲಿಗೆ ಹಸಿರು ಚಾಲನೆ ನೀಡಿದ್ದಾರೆ.
ಗುಜರಾತ್‌ನಲ್ಲಿ ದೇಶದ ಮೊಟ್ಟ ಮೊದಲ ‘ನಮೋ ಭಾರತ್ ರ‍್ಯಾಪಿಡ್ ರೈಲು’ ಸೇವೆಗೆ ಚಾಲನೆ ನೀಡಿದ್ದಾರೆ. ಈ ರೈಲು ಗುಜರಾತ್‌ನ ಕಚ್ ಜಿಲ್ಲೆಯಲ್ಲಿರುವ ಭುಜ್‌ನಿಂದ ಅಹ್ಮದಾಬಾದ್ ನಗರಕ್ಕೆ ಸಂಪರ್ಕವನ್ನು ಕಲ್ಪಿಸುತ್ತದೆ.
ಎರಡು ದಿನಗಳ ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಒಂದೇ ದಿನ ಸುಮಾರು 660 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಈ ಸಂದರ್ಭ ಜಾರ್ಖಂಡ್, ಒಡಿಶಾ, ಬಿಹಾರ ಮತ್ತು ಉತ್ತರ ಪ್ರದೇಶ ಸಂಪರ್ಕಿಸುವ 6 ವಂದೇ ಭಾರತ್ ರೈಲುಗಳಿಗೆ ವರ್ಚುವಲ್ ಚಾಲನೆ ನೀಡಿದ್ದಾರೆ.
ನಮೋ ಭಾರತ್ ರ‍್ಯಾಪಿಡ್ ರೈಲು ಪ್ರಮುಖ ನಿಲ್ದಾಣಗಳಾದ ಅಂಜಾರ್, ಗಾಂಧಿಧಾಮ್, ಭಚೌ, ಸಮಖಿಯಾಲಿ, ಹಲ್ವಾಡ್, ಧ್ರಂಗಾಧ್ರ, ವಿರಾಮಗಮ್, ಚಂದ್ಲೋಡಿಯಾ, ಸಬರಮತಿ ಮತ್ತು ಅಂತಿಮವಾಗಿ ಅಹಮದಾಬಾದ್‌ನ ಕಲುಪುರ್ ಸೇರಿದಂತೆ 9 ನಿಲ್ದಾಣಗಳಲ್ಲಿ ನಿಲ್ಲುತ್ತದೆ. ಸಾರ್ವಜನಿಕರಿಗೆ ಅಹ್ಮದಾಬಾದ್‌ನಿಂದ ಸೆಪ್ಟೆಂಬರ್ 17 ರಂದು ನಿಯಮಿತ ಸೇವೆ ಪ್ರಾರಂಭವಾಗಲಿದೆ.