ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕವಾಗಿದ್ದಾರೆ.
ಹಾಲಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮೆ 31 ರಂದು ನಿವೃತ್ತ ಆದ ಬಳಿಕ ತೆರವಾಗುವ ಸ್ಥಾನಕ್ಕೆ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ.
1986ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ವಂದಿತಾ ಶರ್ಮಾ ಹಾಲಿ ರಾಜ್ಯಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತಾಗಿದ್ದಾರೆ. ಮುಂದಿನ ವರ್ಷ ನವೆಂಬರ್ ವರೆಗೆ ಅಧಿಕಾರವಧಿ ಇರಲಿದೆ.