ಬರೋಬ್ಬರಿ 88 ವರ್ಷಗಳ ಬಳಿಕ ಇತಿಹಾಸ ಬರೆಯಲು ಸಜ್ಜಾಗಿದೆ ವಾಣಿ ವಿಲಾಸ ಜಲಾಶಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯ ಕರ್ನಾಟಕದ ಜಲಪಾತ್ರೆ ಖ್ಯಾತಿಯ ಚಿತ್ರದುರ್ಗ ಹಿರಿಯೂರಿನ ವಾಣಿ ವಿಲಾಸ ಜಲಾಶಯ ಭರ್ತಿಗೆ ಕ್ಷಣಗಣನೆ ಆರಂಭವಾಗಿದ್ದು, ಈ ಐತಿಹಾಸಿಕ ಕ್ಷಣದ ದೃಶ್ಯವನ್ನು ನೋಡಲು ಜನರು ಕಾತುರದಿಂದ ಕಾಯುತ್ತಿದ್ದಾರೆ.

ಬುಧವಾರ ಜಲಾಶಯದ ಒಳಹರಿವು 4,028 ಕ್ಯೂಸೆಕ್ ಆಗಿದ್ದು, ಪ್ರಸ್ತುತ ಜಲಾಶಯದಲ್ಲಿ 129.50 ಅಡಿ ನೀರು ಸಂಗ್ರಹವಾಗಿದೆ. ಕೋಡಿ ಬೀಳಲು ಅರ್ಧ ಅಡಿ ಮಾತ್ರ ಬಾಕಿ ಉಳಿದಿದ್ದು, ಯಾವುದೇ ಕ್ಷಣದಲ್ಲಿ ಈ ಅಪರೂಪದ ಘಟನೆ ನಡೆಯುವ ಸಾಧ್ಯತೆಗಳಿವೆ.
ಈ ಹಿಂದೆ 1933ರಲ್ಲಿ 130.25 ಅಡಿ ಭರ್ತಿಯಾಗಿ ಕೋಡಿ ಬಿದ್ದು ಇತಿಹಾಸ ನಿರ್ಮಾಣ ಆಗಿತ್ತು. ಇದೀಗ 88 ವರ್ಷಗಳ ನಂತರ ಎರಡನೇ ಬಾರಿಗೆ ಕೋಡಿ ಬೀಳಲು ಒಂದೆರಡು ದಿನಗಳು ಮಾತ್ರ ಬಾಕಿ ಉಳಿದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!