ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ 2023ರ ಡಿಸೆಂಬರ್‌ನಲ್ಲಿ ನಡೆದಿದ್ದ ಮಹಿಳೆಯ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಒಟ್ಟು 12 ಮಂದಿ ಅಪರಾಧಿಗಳಿಗೆ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಬೆಳಗಾವಿಯ 10ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎಚ್.ಎಸ್. ಮಂಜುನಾಥ್ ಅವರು ಆದೇಶ ಹೊರಡಿಸಿದ್ದಾರೆ.
ಪ್ರೇಮಿಗಳಿಬ್ಬರು ಮನೆಯವರಿಂದ ವಿರೋಧ ವ್ಯಕ್ತವಾಗಿದ್ದಕ್ಕೆ ಓಡಿಹೋಗಿ ವಿವಾಹವಾಗಿದ್ದರು. ಇದರಿಂದ ಆಕ್ರೋಶಗೊಂಡ ಯುವತಿಯ ಕಡೆಯವರು, ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಭೀಕರವಾಗಿ ಹಲ್ಲೆ ನಡೆಸಿದ್ದರು. ಈ ಅಮಾನವೀಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.
ಇದನ್ನೂ ಓದಿ:
ಬಸಪ್ಪ, ರಾಜು, ಕೆಂಪಣ್ಣ, ಪಾರ್ವತಿ, ಯಲ್ಲವ್ವ, ಲಕ್ಕಪ್ಪ, ಗಂಗವ್ವ, ಸಂಗೀತಾ, ಸಂತೋಷ್, ಶೋಭಾ, ಲಕ್ಕವ್ವ ಹಾಗೂ ಶಿವಪ್ಪ ವನ್ನೂರು ಎಂಬುವವರಿಗೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ ಮತ್ತು ದಂಡ ವಿಧಿಸಲಾಗಿದೆ. ನ್ಯಾಯಾಲಯವು ತೀರ್ಪು ಪ್ರಕಟಿಸುತ್ತಿದ್ದಂತೆ ಅಪರಾಧಿಗಳು ಮತ್ತು ಅವರ ಕುಟುಂಬದವರು ಕಣ್ಣೀರಿಟ್ಟ ದೃಶ್ಯ ಕಂಡುಬಂದಿತು.



