ವರಾಹ ರೂಪಂ ಹಾಡಿನ ವಿವಾದ: ರಿಷಬ್ ಶೆಟ್ಟಿ ಸಿನಿಮಾ ತಂಡಕ್ಕೆ ಸುಪ್ರೀಂಕೋರ್ಟ್ ನಿಂದ ಬಿಗ್ ರಿಲೀಫ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ವಿಶ್ವ ಗೆದ್ದ ಕಾಂತಾರ ಸಿನಿಮಾದ ‘ವರಾಹ ರೂಪಂ’ (Varaha Rupam) ಹಾಡಿಗೆ (Song) ಸಂಬಂಧಿಸಿದಂತೆ ಕೇರಳ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಇಂದು ಸುಪ್ರೀಂ ಕೋರ್ಟ್ ಸಡಿಲಗೊಳಿಸಿದೆ.

ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishabh Shetty) ಹಾಗೂ ನಿರ್ಮಾಪಕ ವಿಜಯ್ ಕಿರಗಂದೂರು (Vijay Kirgandur) ಅವರಿಗೆ ಕೇರಳ ಹೈಕೋರ್ಟ್ ಮೊನ್ನೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ‘ವರಾಹ ರೂಪಂ’ ಹಾಡಿಗೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾಯಮೂರ್ತಿ ಎ.ಬದ್ರುದ್ದೀನ್ ಅವರು ‘ಕಾಪಿರೈಟ್ ಪ್ರಕರಣದಲ್ಲಿ ಸಿವಿಲ್ ಕೋರ್ಟ್ ನಿಂದ ಆದೇಶ ಬರೋವರೆಗೂ ವರಾಹ ರೂಪಂ ಹಾಡನ್ನು ಬಳಕೆ ಮಾಡುವಂತಿಲ್ಲ’ ಎಂದು ಷರತ್ತುಗಳು ಹಾಕಿತ್ತು.ಜೊತೆಗೆ ಫೆ.12 ಮತ್ತು 13 ರಂದು ವಿಚಾರಣೆಗಾಗಿ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು ಎಂದು ಹೇಳಿತ್ತು.

ಇದೀಗ ಸುಪ್ರೀಂ ಕೋರ್ಟ್, ನಟ ನಿರ್ದೇಶಕ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರ್ಗಂದೂರ್ ಗೆ ಮಧ್ಯಂತರ ರಕ್ಷಣೆ ನೀಡಿದೆ. ತನಿಖೆ ವೇಳೆ ಬಂಧಿಸದಂತೆ ಸೂಚಿಸಿದೆ.

‘ಕಾಂತಾರ’ ಸಿನಿಮಾದ ಸೂಪರ್ ಹಿಟ್ ‘ವರಾಹ ರೂಪಂ’ ಹಾಡಿನ ಟ್ಯೂನ್ ಅನ್ನು ಕದಿಯಲಾಗಿದೆ ಎಂದು ಮಲಯಾಳಂನ ತೈಕ್ಕುಡಂ ಬ್ರಿಡ್ಜ್ ಆರೋಪಿಸಿ ದೂರು ನೀಡಿತ್ತು. ಕೋಯಿಕ್ಕೋಡ್ ನ ಠಾಣೆಯಲ್ಲಿ ದೂರು ದಾಖಲಿಸಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!