ರಾಜ್ಯ ಸರಕಾರದಿಂದ ವರಮಹಾಲಕ್ಷ್ಮೀ ಹಬ್ಬ ಆಚರಣೆ: ಮಹಿಳೆಯರಿಗೆ ಅರಿಶಿನ-ಕುಂಕುಮ ವಿತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ರಾಜ್ಯದಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತವನ್ನು ಮುಜರಾಯಿ ಇಲಾಖೆಯ ವತಿಯಿಂದ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ. ಆ ದಿನ ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ, ದೇವಾಲಯಗಳಿಗೆ ಆಗಮಿಸುವಂತಹ ಮಹಿಳೆಯರಿಗೆ ಉತ್ತಮ ಗುಣಮಟ್ಟದ ಕಸ್ತೂರಿ ಅರಿಶಿಣ-ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡಬೇಕು ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ಅವರ ನಿರ್ದೇಶನದ ಮೇರೆಗೆ ಸುತ್ತೋಲೆಯನ್ನು ಹೊರಡಿಸಲಾಗಿದೆ.

ಪ್ರತಿವರ್ಷ ದೀಪಾವಳಿಯ ಸಂದರ್ಭದಲ್ಲಿ ದೇವಸ್ಥಾನಗಳಲ್ಲಿ ಗೋಪೂಜೆ, ಯುಗಾದಿ ದಿನವನ್ನು ಧಾರ್ಮಿಕ ದಿನ ವಾಗಿ ಆಚರಣೆ ಮಾಡುವ ಸಂಪ್ರದಾಯಕ್ಕೂ ನಾವು ಮುಂದಾಗಿದ್ದೇವೆ. ಈ ಬಾರಿ ಶ್ರೀ ವರಮಹಾಲಕ್ಷ್ಮಿ ವ್ರತದ ದಿನದಂದು ಮಹಿಳೆಯಿರಿಗೆ ವಿಶೇಷ ಗೌರವ ನೀಡುವುದು ನಮ್ಮ ಉದ್ದೇಶವಾಗಿದೆ.

ಈ ಹಿನ್ನಲೆಯಲ್ಲಿ ಈಗಾಗಲೇ ಸುತ್ತೋಲೆಯನ್ನು ಹೊರಡಿಸಲಾಗಿದ್ದು, ಲಕೋಟೆಯಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಲಾಗಿರುವ 6 ಹಸಿರು ಬಳೆಗಳು ಹಾಗೂ ಕಸ್ತೂರಿ ಅರಿಶಿಣ-ಕುಂಕುಮವನ್ನು ವಿತರಿಸಬೇಕು ಎಂದು ದೇವಾಲಯದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!