ಹೊಸದಿಗಂತ ಡಿಜಿಟಲ್ ಡೆಸ್ಕ್:
ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಹಣ್ಣು, ತರಕಾರಿ ಮತ್ತು ಹೂವುಗಳ ಬೆಲೆ ಗಗನಕ್ಕೇರಿದೆ. ಹಬ್ಬದ ಬೇಡಿಕೆಯಿಂದಾಗಿ ಪೂರೈಕೆ ಕಡಿಮೆಯಾಗಿದ್ದು, ಬೆಲೆ ಏರಿಕೆಗೆ ಕಾರಣವಾಗಿದೆ. ಹೂವುಗಳ ಬೆಲೆಯೂ ಅಧಿಕವಾಗಿದೆ.
ಹಬ್ಬ ಹಿನ್ನೆಲೆಯಲ್ಲಿ ಬೇಡಿಕೆ ಹೆಚ್ಚಾಗಿದ್ದು, ಅಗತ್ಯದಷ್ಟು ವಸ್ತುಗಳ ಪೂರೈಕೆಯಾಗುತ್ತಿಲ್ಲ. ಹೂವು, ಹಣ್ಣುಗಳ ಬೆಲೆಯಲ್ಲಿ ಏರಿಕೆ ಕಂಡು ಗ್ರಾಹಕರು ಅಸಮಾಧಾನ ಹೊರಹಾಕಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆಯಲ್ಲಿ ಹೂವು ಹಣ್ಣು ಬೆಲೆ ಏರಿಕೆ ನಡುವೆಯೂ ಖರೀದಿ ಜೋರಾಗಿಯೇ ನಡೆಯುತ್ತಿದೆ. ಎಲ್ಲ ಬಗೆಯ ಹೂವಿನ ಬೆಲೆ ಗಗನಕ್ಕೇರಿದೆ. ವರಮಹಾಲಕ್ಷ್ಮಿ ಹಬ್ಬಕ್ಕೆ ಹೂವು ಬೆಳೆದ ರೈತರು ಜಾಕ್ ಪಾಟ್ ಹೊಡೆದಿದ್ದಾರೆ.