ನಾಳೆ ಕೆಎಸ್‍ಆರ್‌ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ

ಹೊಸದಿಗಂತ ವರದಿ ಮಡಿಕೇರಿ: 

ಮಡಿಕೇರಿಯಲ್ಲಿ ನಡೆಯುವ ಫಲಾನುಭವಿಗಳ ಸಮ್ಮೇಳನಕ್ಕೆ ಒಪ್ಪಂದದ ಮೇರೆಗೆ ಬಸ್ಸುಗಳನ್ನು ನಿಯೋಜಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಾ. 18 ರಂದು ಮಡಿಕೇರಿ, ಕುಶಾಲನಗರ, ವೀರಾಜಪೇಟೆ, ಸೋಮವಾರಪೇಟೆ, ಪುತ್ತೂರು, ಸುಳ್ಯ, ಕಡಬ ತಾಲೂಕುಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆಯಾಗುತ್ತಿರುವ ಕೆಎಸ್‍ಆರ್‍ಟಿಸಿ ಬಸ್’ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

ಸಾರ್ವಜನಿಕರು/ ಪ್ರಯಾಣಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ಕೆಎಸ್‍ಆರ್‍ಟಿಸಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಜಯಕರ ಶೆಟ್ಟಿ ಅವರು ಕೋರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!