RCB ಗೆಲುವಿಗಾಗಿ ವಿವಿಧ ಸಂಘಟನೆಗಳಿಂದ ಕಣಿವೆಮಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ

ಹೊಸದಿಗಂತ ಚಿತ್ರದುರ್ಗ:

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ‍್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳ ನಡುವೆ ನಡೆಯುವ ಫೈನಲ್ ಪಂದ್ಯದಲ್ಲಿ ಕರ್ನಾಟಕದ ರಾಯಲ್ ಚಾಲೆಂಜರ‍್ಸ್ ತಂಡ ಗೆಲುವು ಸಾಧಿಸಲೆಂದು ವಿವಿಧ ಸಂಘಟನೆಗಳು ಮಂಗಳವಾರ ಕಣಿವೆಮಾರಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದವು.

ಕರುನಾಡ ವಿಜಯಸೇನೆ ವತಿಯಿಂದ ಕಣಿಮೆ ಮಾರಮ್ಮನಿಗೆ ಪೂಜೆ ಸಲ್ಲಿಸಿ ಕಳೆದ ೧೮ ವರ್ಷಗಳಿಂದ ರಾಯಲ್ ಚಾಲೆಂಜರ‍್ಸ್ ತಂಡ ಐಪಿಎಲ್ ಟಿ-೨೦ ಕ್ರಿಕೆಟ್ ಆಡುತ್ತಾ ಬಂದಿದೆ. ಈಗ ಫೈನಲ್‌ಗೆ ಪ್ರವೇಶಿಸಿದ್ದು, ಇಡೀ ಕರ್ನಾಟಕದ ಜನತೆಯೆ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಹಾಗಾಗಿ ಈ ಬಾರಿಯ ಕಪ್ ನಮ್ಮದಾಗುವ ವಿಶ್ವಾಸವಿದೆ. ಕರ್ನಾಟಕ ತಂಡ ಗೆದ್ದರೆ ರಾಜ್ಯವೇ ಹಬ್ಬದ ರೀತಿಯಲ್ಲಿ ಸಂಭ್ರಮಿಸಲಿ ಎಂದು ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಶುಭ ಹಾರೈಸಿದರು.

ಕರುನಾಡ ವಿಜಯಸೇನೆ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿ ಜಗದೀಶ್, ನಗರಾಧ್ಯಕ್ಷ ಅವಿನಾಶ್, ಕಾರ್ಮಿಕ ಘಟಕದ ಹರೀಶ್‌ಕುಮಾರ್, ಮುಜಾಯಿದ್, ನಾಗೇಶ್, ಶಶಿಧರ್, ಅಖಿಲೇಶ್, ವಿಜಯಬಾಬು, ರತ್ನಮ್ಮ ಇನ್ನು ಮುಂತಾದವರು ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!