ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ವರ್ಷಧಾರೆ: ಇನ್ನೆರಡು ದಿನ ಹೇಗಿರಲಿದೆ ಹವಾಮಾನ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯೇ ಮಳೆ ಆರಂಭವಾಗಿದ್ದು, ಇನ್ನೂ ಎರಡು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ರಾತ್ರಿಯಿಂದಲೇ ಮಳೆ ಆರಂಭವಾಗಿದ್ದು, ಬೆಳಗ್ಗಿನ ಜಾವ ಮಳೆ ಜೋರಾಗಿದೆ. ಬೆಳಗ್ಗೆಯೇ ಮಳೆ ಬಂದ ಕಾರಣ ಕೆಲಸಕ್ಕೆ ತೆರಳುವವರಿಗೆ, ಶಾಲಾ-ಕಾಲೇಜುಗಳಿಗೆ ತೆರಳುವವರಿಗೆ ತೊಂದರೆಯಾಗಿದೆ. ನಗರದಲ್ಲಿ ಮಳೆಯಿಂದಾಗಿ ಟ್ರಾಫಿಕ್ ದಟ್ಟಣೆಯೂ ಹೆಚ್ಚಾಗಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ನಾಳೆಯೂ ಮಳೆ ಮುನ್ಸೂಚನೆ ಇದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರೆಡು ಕಡೆ ಮಳೆಯಾಗುವ ಸಾಧ್ಯತೆ ಇದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ರಾಜ್ಯದಲ್ಲಿ ವಾರಾಂತ್ಯದವರೆಗೂ ಮಳೆ, ಮೋಡ ಕವಿದ ವಾತಾವರಣ ಹಾಗೂ ಅಲ್ಲಲ್ಲಿ ತುಂತುರು ಮಳಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!