ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಮಲೆನಾಡಿನಲ್ಲಿ ಆತಂಕ ಹೆಚ್ಚಿಸಿದೆ. ನಿರ್ಮಾಣ ಹಂತದಲ್ಲಿರುವ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿದೆ.
ಹಾಸನದಿಂದ ಸಕಲೇಶಪುರ ತಾಲೂಕಿನ ಮಾರನಹಳ್ಳಿವರೆಗೆ ನಡೆಯುತ್ತಿರುವ ಚತುಷ್ಪಥ ರಸ್ತೆ ಕಾಮಗಾರಿಯಲ್ಲಿ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಸಕಲೇಶಪುರ ಪಟ್ಟಣದ ಮಳಲಿ ಬಳಿ ನಿರ್ಮಾಣ ಹಂತದಲ್ಲಿರುವ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ.
ತಡೆಗೋಡೆಗಳನ್ನು ನಿರ್ಮಿಸದೆ ಕಾಂಕ್ರೀಟ್ ರಸ್ತೆ ನಿರ್ಮಿಸಿರುವುದರಿಂದ ಸಕಲೇಶಪುರ-ಆಲೆಬೇಲೂರಿನ ರಸ್ತೆಯ ಮೇಲ್ಸೇತುವೆ ಕುಸಿಯುವ ಭೀತಿ ಎದುರಾಗಿದೆ. ಮಳೆ ಮುಂದುವರಿದರೆ ಸೇತುವೆ ಸುತ್ತಲಿನ ನೆಲ ಕುಸಿದರೆ ಸೇತುವೆ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ.