ಕರಾವಳಿಯಲ್ಲಿ ವರ್ಷಧಾರೆ: ಉತ್ತರ ಕನ್ನಡ ಜಿಲ್ಲೆಗಿಂದು ಸಿಎಂ ಸಿದ್ದರಾಮಯ್ಯ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಉತ್ತರ ಕನ್ನಡ ಜಿಲ್ಲೆಯಾದ್ಯಂತ ವರುಣ ಅಬ್ಬರಿಸುತ್ತಿದ್ದಾನೆ. ಜೋರು ಮಳೆಗೆ ಇತ್ತೀಚೆಗೆ ಅಂಕೋಲಾ ತಾಲೂಕಿ ಶಿರೂರು ಬಳಿ ಗುಡ್ಡ ಕುಸಿದು 9 ಜನರ ಪೈಕಿ 7 ಜನರು ಮೃತಪಟ್ಟಿದ್ದರು.

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಣ್ಣು ಕುಸಿದ ಪರಿಣಾಮ ಸಂಚಾರ ಬಂದ ಆಗಿದೆ. ಹೀಗಾಗಿ ಸದ್ಯ ಹಾನಿಯಾದ ಜಿಲ್ಲೆಯ ಸ್ಥಳಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಭೇಟಿ ನೀಡುತ್ತಿದ್ದಾರೆ.

ಈ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಕಳೆದ ಕೆಲವು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅತಿಹೆಚ್ಚು ಹಾನಿಗೆ ಒಳಗಾದ ಉತ್ತರ ಕನ್ನಡ ಜಿಲ್ಲೆಯ ಆಯ್ದ ಸ್ಥಳಗಳಿಗೆ ನಾಳೆ ಭೇಟಿ ನೀಡಿ, ಪರಿಹಾರ ಕಾರ್ಯದ ಪರಿಶೀಲನೆ ನಡೆಸಿ, ಸಂತ್ರಸ್ತರ ಅಹವಾಲುಗಳನ್ನು ಆಲಿಸಲಿದ್ದೇನೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!