ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ 24 ತಾಸುಗಳಲ್ಲಿ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ನಡುವೆ ಮಳೆಯ ಸಾಧ್ಯತೆಗಳ ಬಗ್ಗೆ ವಿವರ ನೀಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಹವಾಮಾನ ವಿಶ್ಲೇಷಕರಾದ ಸಾಯಿಶೇಖರ ಕರಿಕ್ಕಳ ಅವರು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ, ಶಿವಮೊಗ್ಗ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದ್ದರೆ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ ಎಂದಿದ್ದಾರೆ.
ಇನ್ನು ಬೆಳಗಾವಿ – ಉತ್ತರ ಕನ್ನಡ – ಗೋವಾ ಗಡಿ ಭಾಗಗಳ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಒಂದಿಷ್ಟ ಹೆಚ್ಚಾಗಿಯೇ ಇರುವ ಸಾಧ್ಯತೆ ಇದೆ. ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಹಿತ ಮಳೆಯ ಮುನ್ಸೂಚನೆ ಇದೆ. ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸ್ವಲ್ಪ ಹೆಚ್ಚಿರುವ ಸಾಧ್ಯತೆ ಇದೆ. ಉತ್ತರ ಕನ್ನಡ ಒಂದೆರಡು ಕಡೆ ಕೂಡಾ ಮಳೆಯ ಮುನ್ಸೂಚನೆ ಇದೆ ಎಂದು ಅವರು ಹೇಳಿದ್ದಾರೆ.