ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯಲ್ಲಿ ಒಂದೆರಡು ದಿನ ವಿರಾಮ ನೀಡಿದ್ದ ವರುಣ ಮತ್ತೆ ಅಬ್ಬರಿಸಿದ್ದಾನೆ. ನಿನ್ನೆ ಬಿಡುವು ನೀಡಿದ್ದ ವರುಣ ಇಂದು ಮತ್ತೆ ಪ್ರತ್ಯಕ್ಷವಾಗಿದ್ದು, ಸಿಟಿಮಂದಿ ಪರದಾಡುವಂತೆ ಮಾಡಿದೆ.
ಇತ್ತ ಇನ್ನೂ ಎರಡು ದಿನ ರಾಜ್ಯದಲ್ಲಿ ವರುಣ ಅಬ್ಬರಿಸುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕೆಲ ದಿನಗಳ ಹಿಂದೆ ಸಿಲಿಕಾನ್ ಸಿಟಿಯನ್ನು ತಲ್ಲಣಗೊಳಿಸಿದ್ದ ವರುಣ ಇದೀಗ ಮತ್ತೆ ಅಬ್ಬರಿಸಲು ರೆಡಿಯಾಗಿದ್ದಾನೆ. ಎರಡು ದಿನಗಳಿಂದ ಸತತ ಮಳೆಯಿಂದ ಕಂಗೆಟ್ಟಿದ್ದ ನಗರವಾಸಿಗಳಿಗೆ ಕೊಂಚ ಬಿಡುವು ನೀಡಿದ್ದ ಮಳೆರಾಯ ಇಂದು ಮಧ್ಯಾಹ್ನ ನಗರದಲ್ಲಿ ಏಕಾಏಕಿ ಫಜೀತಿ ಸೃಷ್ಟಿಸಿದೆ.
ಮಧ್ಯಾಹ್ನ 12 ಗಂಟೆ ವೇಳೆಗೆ ಸಿಲಿಕಾನ್ ಸಿಟಿಯ ಹಲವೆಡೆ ಮಳೆಯಾಗಿದ್ದು, ಮೋಡ ಕವಿದ ವಾತಾವರಣವಿದ್ದು, ಏಕಾಏಕಿ ಸುರಿದ ಮಳೆಗೆ ನಗರದ ಜನರು ಪರದಾಡಿದರು. ವಿಧಾನಸೌಧ, ಟೌನ್ ಹಾಲ್, ಮೆಜೆಸ್ಟಿಕ್, ಶಾಂತಿನಗರ ಸೇರಿದಂತೆ ಹಲವೆಡೆ ಮಳೆಯಿಂದ ವಾಹನ ಸವಾರರು ಪರದಾಡುತ್ತಿದ್ದರೆ, ಮಳೆರಾಯನ ಎಂಟ್ರಿಯಿಂದ ಟ್ರಾಫಿಕ್ ಜಾಮ್ ಹೆಚ್ಚಾಗಿತ್ತು.