CINE| ದಾಂಪತ್ಯ ಜೀವನಕ್ಕೆ ಕಾಲಿಟ್ಟ ವರುಣ್-ಲಾವಣ್ಯ ತ್ರಿಪಾಠಿ, ಗಣ್ಯರಿಂದ ಶುಭ ಹಾರೈಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಟ ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೂರು ಗಂಟು, ಸಪ್ತಪದಿ ತುಳಿಯುವ ಮೂಲಕ ಪ್ರೀತಿಸುತ್ತಿದ್ದ ಈ ಜೋಡಿ ಅಧಿಕೃತವಾಗಿ ದಂಪತಿಯಾದರು. ಎರಡೂ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾದ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬುಧವಾರ (ನವೆಂಬರ್ 1) ರಾತ್ರಿ ಇಟಲಿಯ ಟಸ್ಕನಿಯಲ್ಲಿ ಇವರ ವಿವಾಹವು ವೇದ ಮಂತ್ರಗಳ ಸಾಕ್ಷಿಯಾಗಿ ನೆರವೇರಿತು. ಸಮಾರಂಭದಲ್ಲಿ ಟಾಲಿವುಡ್ ಸೆಲೆಬ್ರಿಟಿಗಳು ಮತ್ತು ಕುಟುಂಬದವರು ಮತ್ತು ಸಂಬಂಧಿಕರು ಭಾಗವಹಿಸಿದ್ದರು. ವರುಣ್ ಮದುವೆಯಲ್ಲಿ ರಾಮ್ ಚರಣ್, ಅಲ್ಲು ಅರ್ಜುನ್ ಮತ್ತು ನಿತಿನ್ ಸೆಲೆಬ್ರಿಟಿ ಜೋಡಿಗಳ ವಿಶೇಷ ಆಕರ್ಷಣೆಯಾಗಿತ್ತು.

ನವದಂಪತಿಗೆ ಭಾರತದ ಸಿನಿ ಇಂಡಸ್ಟ್ರಿಯ ತಾರೆಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ನವೆಂಬರ್‌ 5ರಂದು ಹೈದರಾಬಾದ್‌ನಲ್ಲಿ ಆರತಕ್ಷತೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!