ಹೊಸದಿಗಂತ ಡಿಜಿಟಲ್ ಡೆಸ್ಕ್:
ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಮದುವೆ ನವೆಂಬರ್ 1 ರಂದು ಇಟಲಿಯ ಟಸ್ಕನಿಯಲ್ಲಿ ಹಿಂದೂ ಸಂಪ್ರದಾಯದಂತೆ ನಡೆಯಿತು. ಈ ಮದುವೆ ಸಮಾರಂಭಕ್ಕೆ ಸಂಬಂಧಿಸಿದ ಹಲವು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ಹೈದಾರಾಬದ್‌ನಲ್ಲಿ ನಿನ್ನೆ ರಾತ್ರಿ ಅದ್ದೂರಿ ಆರತಕ್ಷತೆ ಕಾರ್ಯಕ್ರಮವನ್ನು ನಿರ್ವಹಿಸಲಾಗಿತ್ತು. ಮೆಗಾ ಕುಟುಂಬದ ಅದ್ದೂರಿ ಆರತಕ್ಷತೆಗೆ ಸಿನಿರಂಗ ಸಾಕ್ಷಿಯಾಯಿತು.
ಮದುವೆ ಬಳಿಕ ಎರಡು ದಿನಗಳ ಹಿಂದೆ ಹೈದರಾಬಾದ್ ತಲುಪಿದ ನವಜೋಡಿಗೆ ವಿಮಾನ ನಿಲ್ದಾಣದಲ್ಲಿ ಮೆಗಾ ಅಭಿಮಾನಿಗಳು ಹೂವಿನ ಮಳೆಗರೆದು ಆತ್ಮೀಯವಾಗಿ ಸ್ವಾಗತಿಸಿದರು. ನಿನ್ನೆ ರಾತ್ರಿ ಹೈದರಾಬಾದ್‌ನಲ್ಲಿ ನಡೆದ ಆರತಕ್ಷತೆಗೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಿದ್ದರು.
ಆರತಕ್ಷತೆ ಸಮಾರಂಭದಲ್ಲಿ ಎರಡು ಕುಟುಂಬಗಳು ಸೇರಿದಂತೆ ಚಿತ್ರರಂಗದ ಗಣ್ಯರು, ರಾಜಕೀಯ ಗಣ್ಯರು, ಮಾಧ್ಯಮ ಪ್ರತಿನಿಧಿಗಳು ಹಾಗೂ ಮೆಗಾ ಅಭಿಮಾನಿ ಬಳಗದ ಮುಖಂಡರು ಪಾಲ್ಗೊಂಡಿದ್ದರು. ನವ ದಂಪತಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತ್ತು.
ವರುಣ್-ಲಾವಣ್ಯ ಮದುವೆಯ ಆರತಕ್ಷತೆ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.