September 16, 2026
Wednesday, September 16, 2026
spot_img

ಬಿಸಿಲಿನ ನಡುವೆಯೂ ತಂಪೆರೆದ ವರುಣದೇವ: ಈ 10 ಜಿಲ್ಲೆಗಳಲ್ಲಿ ನಾಳೆ ಮಳೆಬರುತ್ತಂತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಬೇಸಿಗೆಯ ಬಿಸಿಲು ತೀವ್ರವಾಗಿದ್ದರೂ, ಕೆಲ ಭಾಗಗಳಲ್ಲಿ ಮಳೆಯ ಚಟುವಟಿಕೆ ಮತ್ತೆ ಚುರುಕುಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ.

ಮುಂದಿನ ಕೆಲವು ದಿನಗಳ ಕಾಲ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಆಯ್ದ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಮಳೆಯ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆ ಸುರಿಯುವ ನಿರೀಕ್ಷೆ ವ್ಯಕ್ತವಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಭಾಗಗಳಲ್ಲೂ ಮಳೆಯ ವಾತಾವರಣ ಮುಂದುವರಿಯಲಿದೆ.

ಇದನ್ನೂ ಓದಿ:

ಆದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಬಿಸಿಲಿನ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಕಾಣಿಸದಿರಬಹುದು. ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆಯೂ ಇದೆ.

ಇನ್ನೊಂದೆಡೆ ರಾಜಧಾನಿ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರುವ ಸಾಧ್ಯತೆ ಇದ್ದರೂ, ಮಳೆಯ ಸಾಧ್ಯತೆ ಅಲ್ಪವಾಗಿದೆ. ಬೆಳಗ್ಗೆ ಹಾಗೂ ಸಂಜೆ ವೇಳೆಗೆ ತುಸು ತಂಪಿನ ಅನುಭವವಾಗುವ ಸಾಧ್ಯತೆ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !