Sunday, November 2, 2025

ಸಿಲಿಕಾನ್ ಸಿಟಿಯಲ್ಲಿ ವರುಣನ ಎಂಟ್ರಿ: ತಗ್ಗು ಪ್ರದೇಶಗಳು ಜಲಾವೃತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ಇಂದು ಧಾರಾಕಾರ ಮಳೆಯಾಗುತ್ತಿದೆ.

ರಾಜ್ಯದಲ್ಲಿ ಅಬ್ಬರಿಸುತ್ತಿರುವ ಆಶ್ಲೇಷ ಮಳೆ ಊರೂರಲ್ಲೂ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಕಳೆದ ಎರಡು ಮೂರು ದಿನದಿಂದ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು, ಉತ್ತರದ ಜಿಲ್ಲೆಗಳಲ್ಲಂತೂ ನೆರೆ ನರಕವೇ ಸೃಷ್ಟಿಯಾಗಿದೆ.

ತಗ್ಗು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಜಯನಗರ, ಮೆಜೆಸ್ಟಿಕ್, ಎಂಜಿ ರಸ್ತೆ, ವಿಜಯ ನಗರ, ಆರ್‌ಟಿ ನಗರ, ಇಂದಿರಾನಗರ ಮತ್ತು ಕೆಆರ್ ಪುರಂನಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದೆ.

ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ದಿನವೂ ಮಳೆಯಾಗುತ್ತಿದೆ. ರಾಜ್ಯದ ಹಲವೆಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದ್ದು, 28 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

error: Content is protected !!