Wednesday, November 29, 2023

Latest Posts

ಚಿನ್ನಸ್ವಾಮಿ ಸ್ಟೇಡಿಯಂಗೆ ವರುಣ ಎಂಟ್ರಿ: ಪಾಕ್-ನ್ಯೂಜಿಲೆಂಡ್ ಮ್ಯಾಚ್ ಗೆ ಬ್ರೇಕ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಶ್ವಕಪ್ ಪಂದ್ಯದಲ್ಲಿಂದು ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದು, ಹೈವೋಲ್ಟೇಜ್ ಪಂದ್ಯಕ್ಕೆ ವರುಣ ಎಂಟ್ರಿಕೊಟ್ಟಿದ್ದಾನೆ.

ನ್ಯೂಜಿಲೆಂಡ್ ನೀಡಿರುವ 402 ರನ್ ಗುರಿ ಬೆನ್ನತ್ತಿದ ಪಾಕಿಸ್ತಾನ ತಂಡವು ಆರಂಭಿಕ ಆಘಾತದ ಹೊರತಾಗಿಯೂ ಉತ್ತಮ ಆರಂಭ ಪಡೆದಿದೆ. ಪಾಕಿಸ್ತಾನ ತಂಡವು 21.3 ಓವರ್‌ನಲ್ಲಿ ಕೇವಲ ಒಂದು ವಿಕೆಟ್ ಕಳೆದುಕೊಂಡು 160 ರನ್ ಬಾರಿಸಿದೆ. ಇದರ ನಡುವೆ ಪಂದ್ಯಕ್ಕೆ ಮಳೆರಾಯ ಅಡ್ಡಿಯಾಗಿದ್ದಾನೆ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ. ನ್ಯೂಜಿಲೆಂಡ್ ನೀಡಿದ ಕಠಿಣ ಗುರಿ ಬೆನ್ನತ್ತಿದ ಪಾಕಿಸ್ತಾನ ತಂಡವು ಎರಡನೇ ಓವರ್‌ನ ಕೊನೆಯ ಎಸೆತದಲ್ಲೇ ಅಬ್ದುಲ್ ಶಫೀಕ್(4) ವಿಕೆಟ್ ಕಳೆದುಕೊಂಡಿತು. ಎರಡನೇ ವಿಕೆಟ್‌ಗೆ ಫಖರ್ ಜಮಾನ್ ಹಾಗೂ ನಾಯಕ ಬಾಬರ್ ಅಜಂ ಆಸರೆಯಾಗಿದ್ದಾರೆ.

ಈ ಜೋಡಿ ಎರಡನೇ ವಿಕೆಟ್‌ಗೆ ಕೇವಲ 117 ಎಸೆತಗಳನ್ನು ಎದುರಿಸಿ ಮುರಿಯದ 154 ರನ್‌ಗಳ ಜತೆಯಾಟವಾಡುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ಯುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!