ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಕರ್ನಾಟಕ ಸೇರಿದಂತೆ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಮಳೆಯಾಗಲಿದ್ದು, ಈ ಸಂಬಂಧ ಹವಾಮಾನ ಇಲಾಖೆ ವರದಿ ನೀಡಿದೆ. ಆಗ್ನೇಯ ರಾಜ್ಯಗಳಲ್ಲಿ ಹಾಗೂ ಬಿಹಾರ, ಜಾರ್ಖಂಡ್, ಒಡಿಶಾ, ಪಶ್ಚಿಮ ಬಂಗಾಳ, ಕರ್ನಾಟಕ, ತಮಿಳುನಾಡು, ತೆಲಂಗಾಣ ಕೇರಳದವರೆಗೆ ಮಳೆಯಾಗುವ ಸಾಧ್ಯತೆಯಿದೆ.
ಸೈಕ್ಲೋನಿಕ್ ಪರಿಚಲನೆಯಿಂದಾಗಿ ಇಂದು ದೇಶದ ಪೂರ್ವ ಭಾಗದ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇದಕ್ಕಾಗಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದೆ.
ಇಲಾಖೆಯ ಪ್ರಕಾರ, ಪೂರ್ವ ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿಂ, ಬಿಹಾರ, ಜಾರ್ಖಂಡ್, ಒಡಿಶಾ, ಕೇರಳ, ಛತ್ತೀಸ್‌ಗಢ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕದ ಒಳನಾಡಿನಲ್ಲಿ ಇಂದು ಭಾರಿ ಮಳೆಯಾಗಲಿದೆ. ಕೆಲವೆಡೆ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ.
ಒಡಿಶಾ, ದಕ್ಷಿಣ ತಮಿಳುನಾಡು, ಕೇರಳ ಮತ್ತು ಮಾಹೆಯ ಕೆಲವು ಪ್ರದೇಶಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.