ಬಿಸಿಲ ಬೇಗೆಗೆ ಕಂಗೆಟ್ಟ ಜನತೆಗೆ ವರುಣನ ಸಿಂಚನ: ರಾಜ್ಯದ ಹಲವೆಡೆ ಗುಡುಗು ಸಹಿತ ಭಾರೀ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ರಾಜ್ಯದ ಹಲವೆಡೆಗಳಲ್ಲಿ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ರೈತರು ಖುಷಿಯಾಗಿದ್ದಾರೆ.

ಮಂಡ್ಯ, ದಾವಣಗೆರೆ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಮೈಸೂರು ಹಾಗೂ ವಿಜಯಪುರದಲ್ಲಿ ಮಳೆಯಾಗಿದೆ.

ಮೈಸೂರಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಜನ ಸಂತಸಗೊಂಡಿದ್ದಾರೆ. ಇನ್ನು ಸಂಜೆ ಮಂಡ್ಯ ಜಿಲ್ಲೆಯ ಹಲವೆಡೆ ಅರ್ಧ ಗಂಟೆಗಳ ಕಾಲ ಬಿರುಗಾಳಿ ಸಹಿತ ಮಳೆ (Karnatak Rain) ಸುರಿದಿದೆ. ಬಿಸಿಲ ಬೇಗೆಯಿಂದ ತತ್ತರಗೊಂಡಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಬಿರುಗಾಳಿ ಸಹಿತ ಭಾರೀ ಮಳೆಗೆ ಆದಿಚುಂಚನಗಿರಿ ಕಮಾನು ಧರೆಗೆ ಉರುಳಿದೆ. ಕಮಾನು ರಸ್ತೆಗೆ ಬಿದ್ದ ಕಾರಣ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿದೆ.

ಗಣಂಗೂರು ಟೋಲ್ ಸಮೀಪ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ವಿದ್ಯುತ್ ಕಂಬಗಳು ಧರೆಗೆ ಉರುಳಿದೆ. ವಾಹನ ಸಂಚಾರ ಅಸ್ತವ್ಯಸ್ಥಗೊಂಡಿದೆ.

ದಾವಣಗೆರೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಳೆರಾಯನ ಆಗಮನವಾಗಿದೆ. ಬೆಳಗ್ಗೆಯಿಂದ ಬಿಸಿಲಿನಿಂದ ಕಂಗೆಟ್ಡಿದ್ದ ಜನರಿಗೆ ವರುಣ ತಂಪೆರೆದಿದ್ದಾನೆ. ದಾವಣಗೆರೆ, ಹರಪ್ಪನಹಳ್ಳಿ ಸೇರಿದಂತೆ ಹಲವು ಕಡೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ಜನರಲ್ಲಿ ಸಂತಸ ಮನೆ ಮಾಡಿದೆ.

ರಾಯಚೂರಿನಲ್ಲಿಯೂ ಮಳೆಯಾಗಿದೆ. ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಲವೆಡೆ ಜೋರು ಮಳೆಯಾಗಿದೆ. ದಿನೇ ದಿನೇ ಏರುತ್ತಿರುವ ಗರಿಷ್ಠ ತಾಪಮಾನಕ್ಕೆ ಜನ ಹೈರಾಣಾಗಿದೆ. ಒಟ್ಟಿನಲ್ಲಿ ಬಿಸಿಲಿನ ತಾಪಕ್ಕೆ ತತ್ತರಿಸಿದ್ದ ಬಿಸಿಲನಾಡು ಜನರಿಗೆ ಕೊಂಚ ರಿಲೀಫ್ ಸಿಕ್ಕಿದೆ. ಇತ್ತ ಕೊಪ್ಪಳ ಜಿಲ್ಲೆಯಲ್ಲಿಯೂ ಅರ್ಧಗಂಟೆ ಭಾರೀ ಗಾಳಿಯೊಂದಿಗೆ ಮಳೆ ಸುರಿದಿದೆ. ಮಳೆಯ ಆಗಮನದಿಂದ ಜನತೆ ಸಂತಸಗೊಂಡಿದ್ದಾರೆ.

ಧಾರವಾಡ ಜಿಲ್ಲೆಯಾದ್ಯಂತ ಆಲಿಕಲ್ಲು ಮಳೆಯಾಗಿದೆ. ನಗರದಲ್ಲಿ ಮಧ್ಯಾಹ್ನದವರೆಗೆ ಉರಿ ಬಿಸಿಲು, ಮಧ್ಯಾಹ್ನದ ನಂತರ ಸಂಪೂರ್ಣ ಮೋಡ ಕವಿದ ವಾತಾವರಣವಿತ್ತು. ಅಂಜೆಯಾಗ್ತಿದ್ದಂತೆಯೇ ಭಾರೀ ಮಳೆಯಾಗಿದೆ, ರೈತರು ಸಂತಸಗೊಂಡಿದ್ದಾರೆ. ವಿಜಯಪುರದಲ್ಲಿಯೂ ಬಿರುಗಾಳಿ, ಗುಡುಗು ಸಮೇತ ಧಾರಾಕಾರ ಮಳೆಯಾಗಿದೆ.

ಹಾವೇರಿಯಲ್ಲೂ ಸುಮಾರು 1 ಗಂಟೆಗೂ ಹೆಚ್ಚು ಮಳೆಯಾಗಿದೆ. ಮಳೆಯಿಂದಾಗಿ ಅಪಾರ ಬಾಳೆ ಬೆಳೆ ನಾಶವಾಗಿದ್ದು, ಕೆಲವೆಡೆ ಮನೆಯ ಮೇಲ್ಚಾವಣಿ ಗಾಳಿಗೆ ಹಾನಿಗೊಂಡಿವೆ. ಇದೀಗ ಬೆಳೆ ನಾಶಕ್ಕೆ ಪರಿಹಾರ ಒದಗಿಸಿಕೊಡುವಂತೆ ರೈತರು ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!