ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಗಾರು ಆರ್ಭಟ ಜೋರಾಗಿದ್ದು, ರಾಜ್ಯದ ವಿವಿದೆಡೆ ಉತ್ತಮ ಮಳೆಯಾಗುತ್ತಿದೆ. ಮುಂದಿನ 24 ಗಂಟೆಗಳಲ್ಲಿಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಹಾಗೂ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇತ್ತ ನಿರಂತರ ಮಳೆಯಾಗುತ್ತಿದ್ದು, ಹಲವು ನದಿಗಳು ತುಂಬಿ ಹರಿಯುತ್ತಿದ್ದು, ಸೇತುವೆಗಳು ಜಲಾವೃತವಾಗಿವೆ.