ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ವರುಣಾರ್ಭಟ ಆರಂಭವಾಗಿದೆ.
ಹಲವೆಡೆ ಭಾರಿ ಮಳೆಯಾಗಿದ್ದು, ಪ್ರಮುಖ ರಸ್ತೆಗಳು ಜಲಾವೃತಗೊಂಡಿವೆ. ರಸ್ತೆಗಳು ನದಿಯಂತಾಗಿದ್ದು, ಚಾಲಕರು ಪರದಾಡುವ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಬೆಂಗಳೂರಿನ ಶಾಂತಿನಗರ, ಮೆಜೆಸ್ಟಿಕ್, ಆರ್‌ಆರ್ ನಗರ, ಮೈಸೂರು ರಸ್ತೆ ಸೇರಿದಂತೆ ಹಲವೆಡೆ ಮಳೆಯಾಗಿದ್ದು, ಸಂಜೆ ವೇಳೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೊಡಗು, ಚಾಮರಾಜನಗರ, ಕೋಲಾರ, ಮೈಸೂರು, ಸೇರಿದಂತೆ 16 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಮೇ 19ರಿಂದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿದುಬಂದಿದೆ.