ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಭಾರತದಲ್ಲಿ ಮತ್ತೆ ವರುಣನ ಆರ್ಭಟ ಕಂಡು ಬರುವ ಮಹತ್ವದ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯು ನೀಡಿದೆ.
ಮುಂದಿನ 5 ದಿನಗಳ ಮಳೆಯ ಎಚ್ಚರಿಕೆಯನ್ನು ನೀಡಲಾಗಿದೆ.
IMD ಮಾಹಿತಿ ಪ್ರಕಾರ ಇದೇ ಡಿಸೆಂಬರ್ 17 ರಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಡಿಸೆಂಬರ್ 19ರಿಂದ ಕರಾವಳಿ, ಮಲೆನಾಡು & ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯು ಪುನಶ್ಚೇತನಗೊಳ್ಳುವ ಸಾಧ್ಯತೆಯಿದೆ ಎಂದಿದೆ.
ಪ್ರಮುಖವಾಗಿ ಡಿಸೆಂಬರ್ 17ರಿಂದ ತಮಿಳುನಾಡು, ಪುದುಚೇರಿಯಲ್ಲಿ ಮಳೆಯ ಆರ್ಭಟ ಜೋರಾಗಿರಲಿದೆ. ಆಂಧ್ರಪ್ರದೇಶ ಕಡಲತೀರದ ಪ್ರದೇಶ, ರಾಯಲ್ ಸೀಮಾ, ಕರ್ನಾಟಕದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದು ಒಣ ಹವೆ ಇದ್ದು, ಹಲವೆಡೆ ಸಾಧಾರಣ ಹಾಗೂ ಕೆಲವೆಡೆ ದಟ್ಟ ಮಂಜು ಮುಸುಕಿನ ವಾತಾವರಣ ಕಂಡು ಬಂದಿದೆ. ಡಿಸೆಂಬರ್ 17ರಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಮುಂದಿನ 5 ದಿನಗಳ ಮಳೆಯಾಗುವ ಸಾಧ್ಯತೆ ಇದೆ.