ಬಿಸಿಲ ಬೇಗೆಗೆ ತಂಪೆರೆದ ವರುಣ: ಬೆಳ್ತಂಗಡಿ, ಸುಳ್ಯ ತಾಲೂಕಿನ ಹಲವೆಡೆ ಉತ್ತಮ ಮಳೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ. ಬಿಸಿಲ ಬೇಗೆಗೆ ಹೈರಾಣಾಗಿದ್ದ ಜನತೆಗೆ ತುಸು ಸಮಾಧಾನ ತಂದಿದೆ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ, ಧರ್ಮಸ್ಥಳದಲ್ಲಿ ಉತ್ತಮ ಮಳೆಯಾಗಿದ್ದು, ವಾಹನ ಸವಾರರು ಸಂಚರಿಸಲು ಪರದಾಡುವಂತಾಗಿದೆ. ಇನ್ನು ಮುಂಡಾಜೆ, ಗುರುವಾಯನಕೆರೆ ಮೊದಲಾದೆಡೆ ಹನಿ ಹನಿ ಮಳೆಯಾಗಿದೆ. ಗುರುವಾಯನಕರೆ ಪ್ರದೇಶದಲ್ಲಿ ಸಂಜೆ ವೇಳೆ ಮೋಡ ಕವಿದ ವಾತಾವರಣವಿತ್ತು ಬಳಿಕ ಮಳೆ ಸುರಿದಿದೆ. ಕಾಜೂರು-ಕಿಲ್ಲೂರು ಕಡೆ ಗುಡುಗು ಸಿಡಿಲು ಮಾತ್ರ ಇತ್ತು. ಶುಕ್ರವಾರ … Continue reading ಬಿಸಿಲ ಬೇಗೆಗೆ ತಂಪೆರೆದ ವರುಣ: ಬೆಳ್ತಂಗಡಿ, ಸುಳ್ಯ ತಾಲೂಕಿನ ಹಲವೆಡೆ ಉತ್ತಮ ಮಳೆ