October 17, 2026
Saturday, October 17, 2026
spot_img

ಬಿಸಿಲ ಬೇಗೆಗೆ ತಂಪೆರೆದ ವರುಣ: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹತ್ತು ಹಲವು ದಿನಗಳಿಂದ ಬಿಸಿಲ ಬೇಗೆಯಿಂದ ಬಳಲಿದ ರಾಜ್ಯ ರಾಜಧಾನಿ ಬೆಂಗಳೂರಿನ ಜನರಿಗೆ ಬುಧವಾರ ಸಂಜೆ ಸುರಿದ ಗಾಳಿ, ಗುಡುಗು ಸಹಿತ ಸುರಿದ ಭಾರೀ ಮಳೆ ಸಂತಸ ಮೂಡಿಸಿದೆ.

ಸಂಜೆಯಾಗುತ್ತಿದ್ದಂತೆಯೇ ಬೆಂಗಳೂರಿನ ಹಲವೆಡೆ ಮಳೆರಾಯ ಎಂಟ್ರಿ ಕೊಟ್ಟು ತಂಪೆರೆದಿದ್ದು, ಜನರನ್ನು ಒಂದಿಷ್ಟು ನಿಟ್ಟುಸಿರು ಬಿಡುವಂತೆ ಮಾಡಿತು.

ಬೆಂಗಳೂರಿನ ಶಾಂತಿನಗರ, ರಿಚ್ಮಂಡ್ ಸರ್ಕಲ್, ಕೋರಮಂಗಲ, ಮೆಜೆಸ್ಟಿಕ್, ಮಾರ್ಕೆಟ್ ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ವಾಹನ ಸವಾರರು ರಸ್ತೆಯಲ್ಲಿ ಸಿಲುಕಿ ಪರದಾಡುವಂತಾಗಿದೆ.

ಬೆಂಗಳೂರಿಗೆ ಮುಂದಿನ ಮೂರು ಗಂಟೆಗಳ ಕಾಲ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ.

Must Read