May 15, 2026
Friday, May 15, 2026
spot_img

ವರುಣನ ವಾರ್ನಿಂಗ್: ಅರ್ಧಕರ್ಧ ಕರ್ನಾಟಕದಲ್ಲಿ ಗುಡುಗು-ಮಿಂಚಿನ ಅಬ್ಬರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಕರ್ನಾಟಕದ ಜನರಿಗೆ ಇದೀಗ ಮಳೆರಾಯ ಭರ್ಜರಿ ಎಂಟ್ರಿ ಕೊಡಲು ಸಜ್ಜಾಗಿದ್ದಾನೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ, ಗುಡುಗು ಮತ್ತು ಬಿರುಗಾಳಿ ಅಬ್ಬರಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಕೆಲ ಭಾಗಗಳಲ್ಲಿ ಮಿಂಚಿನ ಅಪಾಯವೂ ಹೆಚ್ಚಿರುವುದರಿಂದ ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಹವಾಮಾನ ಇಲಾಖೆ ಪ್ರಕಾರ, ಮೇ 17ರವರೆಗೆ ಕೆಲ ಪ್ರದೇಶಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಮಿಂಚು ಮತ್ತು ಬಿರುಗಾಳಿಯಿಂದ ಕೆಲವು ಕಡೆಗಳಲ್ಲಿ ಹಾನಿಯ ಸಂಭವವೂ ಇರುವುದಾಗಿ ಇಲಾಖೆ ಎಚ್ಚರಿಸಿದೆ. ಮೇ 18ರಂದು ಗಾಳಿಯ ವೇಗ ಸ್ವಲ್ಪ ಕಡಿಮೆಯಾಗುವ ನಿರೀಕ್ಷೆಯಿದ್ದರೂ, ಮಳೆಯ ವಾತಾವರಣ ಮುಂದುವರಿಯಲಿದೆ.

ಇದನ್ನೂ ಓದಿ:

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ರಾಜ್ಯದ ಅರ್ಧಕ್ಕಿಂತ ಹೆಚ್ಚು ಪ್ರದೇಶಗಳಲ್ಲಿ ಗುಡುಗು-ಮಿಂಚಿನ ಮಳೆಯ ಸಾಧ್ಯತೆ ಇದೆ.

ಯಾದಗಿರಿ, ರಾಯಚೂರು, ಧಾರವಾಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಮಂಡ್ಯ, ಬೆಂಗಳೂರು ನಗರ ಹಾಗೂ ಗ್ರಾಮಾಂತರ ಸೇರಿದಂತೆ ಅನೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !