ರಾಜ್ಯದಲ್ಲಿ ಶುರುವಾಗಲಿದೆ ವರುಣನ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದಲ್ಲಿ ಮಳೆಯ ಅಬ್ಬರ (Karnataka Rain) ಮುಂದುವರಿದಿದ್ದು, ಮೇ 6-7ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಸೇರಿ ಚಿತ್ರದುರ್ಗ, ಚಾಮರಾಜನಗರ, ಮೈಸೂರು, ಮಂಡ್ಯದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Weather Report) ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೊಪ್ಪಳ, ರಾಯಚೂರು, ಯಾದಗಿರಿ, ಬೀದರ್, ಗದಗ ಹಾಗೂ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ತಾಪಮಾನ ಇಳಿಕೆ (Temperature) ಆಗಲಿದೆ. ಗರಿಷ್ಠ ಉಷ್ಣಾಂಶವು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್‌ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್‌ ಕಡಿಮೆಯಾಗುವ ಸಾಧ್ಯತೆ ಇದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!