ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ವರುಣ ಕೊಂಚ ಬಿಡುವು ನೀಡಿದ್ದು, ಅಲ್ಲಲ್ಲಿ ಮಳೆಯಾಗುತ್ತಿದೆ.ಉತ್ತರ ಒಳನಾಡಿನ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಹಾಗೂ ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮೂನ್ಸುಚನೆ ನೀಡಿದೆ.
ಕರಾವಳಿ ಕರ್ನಾಟಕದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.