ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಅಲ್ಲಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರದಲ್ಲಿ ಇಂದು ಮಳೆಯಾಗಲಿದೆ.
ವಿಜಯನಗರ, ತುಮಕೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ವಿಜಯಪುರ, ಹಾವೇರಿ, ಗದಗ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಮುಂದುವರೆಯಲಿದೆ. ಮದ್ದೂರು, ಯಲಹಂಕ, ಮಾಗಡಿ, ಬೆಂಗಳೂರು ಏರ್ಪೋರ್ಟ್, ಮಾಗಡಿ, ಚಿಂತಾಮಣಿ, ಸರಗೂರು, ನಾಗಮಂಗಲ, ರಾಯಲ್ಪಾಡು, ಬೇಲೂರು, ಜಿಕೆವಿಕೆ, ಎಲೆಕ್ಟ್ರಾನಿಕ್ಸಿಟಿ, ಎಂಎಂ ಹಿಲ್ಸ್, ಹೆಸರಘಟ್ಟ, ನಾಪೋಕ್ಲುವಿನಲ್ಲಿ ಮಳೆಯಾಗಿದೆ.
ಕಲಬುರಗಿಯಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೆಳಗಾವಿ ವಿಮಾನ ನಿಲ್ದಾಣದಲ್ಲಿ 17.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್ಎಎಲ್ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ನಗರದಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.