ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿರಂತರ ಮಳೆಯಿಂದಾಗಿ ದೆಹಲಿಯ ಕೆಲವು ಭಾಗಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆಯು ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಈಗಾಗಲೇ ಮಳೆಯಿಂದಾಗಿ ನಗರದ ಕೆಲವು ಪ್ರದೇಶಗಳು ಜಲಾವೃತವಾಗಿದ್ದು, ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. IMD ಪ್ರಕಾರ, ರಾಜಧಾನಿಯ ಹೆಚ್ಚಿನ ಭಾಗಗಳಲ್ಲಿ ಮುಂದಿನ ಕೆಲವು ಗಂಟೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ನಗರದ ಕೆಲವೆಡೆ ರಸ್ತೆಗಳು ಜಲಾವೃತಗೊಂಡಿರುವುದರಿಂದ ವಾಹನ ಸವಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮೋಡ ಕವಿದ ವಾತಾವರಣವಿರುವುದರಿಂದ ಮಳೆಯಾಗುವ ನಿರೀಕ್ಷೆಯಿದೆ.