ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿಂದು ವರುಣನ ಆರ್ಭಟ ಮುಂದುವರಿಯಲಿದೆ. ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.