ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ವರುಣಾರ್ಭಟ ಮುಂದುವರೆದಿದೆ. ಬೆಂಗಳೂರಿನಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಕರ್ನಾಟಕದ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ಉತ್ತರ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.