ವರುಣಾರ್ಭಟಕ್ಕೆ ಮುಂಬೈ ತತ್ತರ, ಈವರೆಗೂ ನಾಲ್ಕು ಸಾವು, ಶಾಲೆಗಳಿಗೆ ರಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮುಂಬೈನಲ್ಲಿ ಭಾರೀ ಮಳೆ ಪರಿಣಾಮ ನಾಲ್ಕು ಜನ ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ ಹೊತ್ತಿನಲ್ಲಿ ಮಳೆ ಶುರುವಾಯಿತು. 5 ಗಂಟೆಗಳ ಅವಧಿಯಲ್ಲಿ ಮುಂಬೈ ಮಹಾನಗರ ಪ್ರದೇಶದ ಕೆಲವು ಭಾಗಗಳಲ್ಲಿ 200 ಮಿ.ಮೀ ಗಿಂತ ಹೆಚ್ಚು ಮಳೆ ಸುರಿದಿದೆ.

Mumbai Rains LIVE Updates: City records 88mm rainfall between 4 and 10 pm,  trains, flights face disruptions

ಗುರುವಾರ ಬೆಳಗ್ಗೆ 8:30 ರವರೆಗೆ ರೆಡ್ ಅಲರ್ಟ್ ಇರುವ ಹಿನ್ನೆಲೆಯಲ್ಲಿ ಮುಂಬೈ ಮತ್ತು ಥಾಣೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪ್ರಯಾಣಿಕರು ರಸ್ತೆಗಳಲ್ಲಿ, ನಿಲ್ದಾಣಗಳಲ್ಲಿ ಮತ್ತು ರೈಲುಗಳಲ್ಲಿ ಗಂಟೆಗಟ್ಟಲೆ ಸಿಕ್ಕಿಹಾಕಿಕೊಂಡಿದ್ದಾರೆ.

Mumbai Rains LIVE Updates: IMD issues 'red' alert for 'heavy rain' for  Thursday; schools, colleges to remain closed | Today Newsಭಾರೀ ಮಳೆಗೆ ಬಲಿಯಾದವರಲ್ಲಿ 45 ವರ್ಷದ ಮಹಿಳೆಯೊಬ್ಬರು ಅಂಧೇರಿ ಪೂರ್ವದ ನುಲ್ಲಾದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕಲ್ಯಾಣ್‌ನ ವರಪ್ ಗ್ರಾಮದಲ್ಲಿ ಕಲ್ಲು ಕೋರೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಖೋಪೋಲಿಯ ಜೆನಿತ್ ಜಲಪಾತದ ಬಳಿ ಮತ್ತೋರ್ವ ಮಹಿಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here