ಹೊಸದಿಗಂತ ಅಂಕೋಲಾ:
ಉತ್ತರ ಕನ್ನಡ ಜಿಲ್ಲೆಯಲ್ಲಿ ಬುಧವಾರ ಭಾರೀ ಪ್ರಮಾಣದಲ್ಲಿ ಮಳೆ ಅಬ್ಬರಿಸಿದ್ದು ಜಿಲ್ಲೆಯಲ್ಲಿ ರೆಡ್ ಅಲರ್ಟ ಎಚ್ಚರಿಕೆ ಇರುವುದರಿಂದ ಮೇ 29 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೆ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ.
ಬುಧವಾರ ಮದ್ಯಾಹ್ನನದಿಂದ ಜಿಲ್ಲೆಯ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಹವಾಮಾನ ಇಲಾಖೆ ಮುನ್ಸೂಚನೆಯಂತೆ ಮೇ 29 ರಂದು ಮದ್ಯಾಹ್ನನದ ವರೆಗೆ ಭಾರೀ ಮಳೆ ಮುಂದುವರಿಯಲಿದೆ ಎಂದು ತಿಳಿದು ಬಂದಿದೆ.
ಸುರಕ್ಷತಾ ಕ್ರಮವಾಗಿ ಅಂಗನವಾಡಿ ಕೇಂದ್ರಗಳಿಗೆ ರಜೆ ನೀಡಲಾಗಿದ್ದು ಶಾಲೆಗಳ ಪ್ರಾರಂಭೋತ್ಸವ ಇರುವುದರಿಂದ ಶಾಲೆಗಳಿಗೆ ರಜೆ ನೀಡುವ ಕುರಿತು ಸದ್ಯ ಯಾವುದೇ ರೀತಿಯ ನಿರ್ಧಾರವನ್ನು ತೆಗೆದುಕೊಂಡಿಲ್ಲ ಪರಿಸ್ಥಿತಿಯನ್ನು ಅವಲೋಕಿಸಿ ಆ ಕುರಿತು ಶೀಘ್ರದಲ್ಲಿ ನಿರ್ಧಾರ ಪ್ರಕಟಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.