ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜಿಲ್ಲೆಯಾದ್ಯಾಂತ ರೆಡ್ ಅಲರ್ಟ್ ನೀಡಲಾಗಿದೆ. ಅಷ್ಟೇ ಅಲ್ಲದೆ ನಾಳೆ ಹತ್ತು ತಾಲೂಕುಗಳ ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶಿಸಿದ್ದಾರೆ.
ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಜೋಯಿಡಾ, ದಾಂಡೇಲಿ ಭಾಗಗಳಿಗೆ ರಜೆ ನೀಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಶರಾವತಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಜಲಾಶಯದ ಗರಿಷ್ಟ ಮಟ್ಟ – 1819.00 ಮೀಟರ್ ಇದ್ದು, ಜಲಾಶಯದ ಇಂದಿನ ನೀರಿನ ಮಟ್ಟ- 1819.65, ಜಲಾಶಯದ ಇಂದಿನ ಒಳ ಹರಿವು- 20154.00 ಕ್ಯೂಸೆಕ್ ಇದ್ದು, ಇನ್ನೂ ಮೂರು ದಿನ ಹೆಚ್ಚಿನ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.