September 5, 2026
Saturday, September 5, 2026
spot_img

ಬೆಂಗಳೂರು ಸೇರಿ ರಾಜ್ಯಾದ್ಯಂತ ವರುಣನ ಆರ್ಭಟ, ಕರಾವಳಿಗೆ ಯೆಲ್ಲೋ ಅಲರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರಾವಳಿ ಸೇರಿದಂತೆ ಇಂದು ರಾಜ್ಯದಲ್ಲಿ ಹಲವೆಡೆ ಭಾರೀ ಮಳೆಯಾಗಲಿದ್ದು, ಕರಾವಳಿ ಭಾಗಕ್ಕೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.ಬೆಂಗಳೂರು ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಹಾಗೂ ಗಾಳಿ ಸಹಿತ ಮಳೆ ಸುರಿಯಲಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಲಘುವಾಗಿ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ಉಳಿದಂತೆ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರವಾದ ಮಳೆಯಾಗಬಹುದು.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಲಘುವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಾಳಿ ಸಹಿತ ಹಗುರವಾದ ಮಳೆಯಾಗುವ ಮುನ್ಸೂಚನೆ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !