ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ: ನಾಳೆ, ನಾಡಿದ್ದು ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಹೊಸದಿಗಂತ ವರದಿ,ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಮೇ 29 ಮತ್ತು 30 ರಂದು ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.

ಈ ಎರಡು ದಿನಗಳನ್ನು ಮುಂದಿನ ದಿನಗಳಲ್ಲಿ ಸರಿದೂಗಿಸುವ ನಿಬಂಧನೆಗೆ ಒಳಪಟ್ಟು ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಆದರೆ ಎಸ್ ಎಸ್ ಎಲ್ ಸಿ ಪರೀಕ್ಷೆ-2 ಈಗಾಗಲೇ ನಿಗದಿಯಾಗಿರುವಂತೆ ನಡೆಯುತ್ತವೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!