Monday, July 4, 2022

Latest Posts

ಸಿಲಿಕಾನ್ ಸಿಟಿಯಲ್ಲಿ ವರುಣನ ಆರ್ಭಟ: ವಾಹನ ಸವಾರರ ಪರದಾಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಧಾನಿ ಬೆಂಗಳೂರಲ್ಲಿ ವರುಣ ಆರ್ಭಟ ಶುರುವಾಗಿದ್ದು, ವಸಂತನಗರ, ಮೆಜೆಸ್ಟಿಕ್, ಆರ್.ಟಿ ನಗರ , ಶಾಂತಿನಗರ, ಕಾರ್ಪೊರೇಷನ್, ಮೈಸೂರು ರಸ್ತೆ, ಮೆಜೆಸ್ಟಿಕ್, ವಿಧಾನಸೌಧ, ಶಿವಾಜಿನಗರ, ಸೇರಿದಂತೆ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ.
ಬೆಳ್ಳಿಗೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ಸಂಜೆಯಾಗುತ್ತಿದಂತೆ ಸಂಜೆಗತ್ತಲು ಆವರಿಸಿ, ಬಿಸಿಲಿನಿಂದ ಕಂಗೆಟ್ಟಿದ್ದ ಸಿಟಿ ಜನರಿಗೆ ಮಳೆಯರಾಯ ತಂಪೆರೆದಿದ್ದಾನೆ.
ರಸ್ತೆಗಳು ನದಿಯಂತಾಗಿ ವಾಹನ ಸವಾರರ ಪರದಾಡಿದ್ದಾರೆ. ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಠಿಯಾಗುವ ಎಲ್ಲಾ ಸಾಧ್ಯತೆಯಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss