ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ: ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ ಮುಂದುವರೆದಿದೆ. ಆಗಸ್ಟ್​ 24ರವರೆಗೆ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.

ಮುಂಜಾಗ್ರತಾ ಕ್ರಮವಾಗಿ ಧಾರವಾಡ, ಚಿಕ್ಕಮಗಳೂರು, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.

ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಬಾಗಲಕೋಟೆ, ಯಾದಗಿರಿ, ಬಳ್ಳಾರಿ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

ಕೊಡಗು
ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಸಂಬಂಧ ಜಿಲ್ಲೆಯ ಅಂಗನವಾಡಿ, ಶಾಲೆಗಳು, ಕಾಲೇಜುಗಳಿಗೆ ನಾಳೆಯೂ (ಆ.19) ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು
ಚಿಕ್ಕಮಗಳೂರು ಜಿಲ್ಲೆಯಲ್ಲೂ ಅಂಗನವಾಡಿ ಮತ್ತು ಶಾಲೆಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ. ಮಲೆನಾಡು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್​ಆರ್ ​ಪುರ, ಚಿಕ್ಕಮಗಳೂರು ತಾಲೂಕಿನ ಜಾಗರ, ಖಾಂಡ್ಯ, ಆಲ್ದೂರು, ಕಸಬಾ, ಅಂಬಳೆ, ವಸ್ತಾರೆ, ಆವತಿ ಹೋಬಳಿ, ತರೀಕೆರೆ ತಾಲೂಕಿನ ಲಕ್ಕವಳ್ಳಿ, ಲಿಂಗದಹಳ್ಳಿ ಹೋಬಳಿಯಲ್ಲಿ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ
ಬೆಳಗಾವಿ ಜಿಲ್ಲೆಯ ಏಳು ತಾಲೂಕಿನಲ್ಲಿನ ಅಂಗನವಾಡಿ ಕೇಂದ್ರ, ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ, ಬೈಲಹೊಂಗಲ, ಕಿತ್ತೂರು, ಖಾನಾಪುರ, ರಾಮದುರ್ಗ, ಸವದತ್ತಿ, ಚಿಕ್ಕೋಡಿ ತಾಲೂಕಿನಲ್ಲಿನ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ಧಾರವಾಡ
ಧಾರವಾಡ ಜಿಲ್ಲೆಯಲ್ಲಿನ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ. ಮಕ್ಕಳ ಆರೋಗ್ಯ ಹಾಗೂ ಸುರಕ್ಷತೆ ದೃಷ್ಟಿಯಿಂದ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ. ಈ ರಜೆಯನ್ನು ಮುಂದಿನ ಸಾರ್ವತ್ರಿಕ ರಜಾ ದಿನಗಳಲ್ಲಿ ಹೊಂದಾಣಿಕೆ ಮಾಡಲು ಸೂಚನೆ ನೀಡಿದ್ದಾರೆ.

ಉತ್ತರ ಕನ್ನಡ
ಉತ್ತರ ಕನ್ನಡ ಜಿಲ್ಲೆಯ 11 ತಾಲೂಕಿನ ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!