ಸಿದ್ದು ಪ್ರಮಾಣ ವಚನಕ್ಕೆ ಆಗುತ್ತಾ ವರುಣನ ಎಂಟ್ರಿ?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅತ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಇತ್ತ ವರುಣ ಆಗಮನದ ಸುಳಿವು ನೀಡಿದ್ದಾನೆ.

ಬಿಸಿಲಿನಿಂದ ಕಂಗೆಟ್ಟಿರುವ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಶನಿವಾರ ಮತ್ತು ಭಾನುವಾರ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೀಗಾಗಿ ನಾಳೆ ನಡೆಯುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಳೆ ಅಡ್ಡಿಯಾಗಬಹುದಾ ಸಂಶಯ ಮೂಡಿದೆ.

ಮೇ 20 ಮತ್ತು ಮೇ 21 ರಂದು ದಕ್ಷಿಣ ಕರ್ನಾಟಕದ ಕೆಲವು ಭಾಗಗಳಲ್ಲಿ ಮಿಂಚು ಮತ್ತು ವೇಗವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮೇ 21 ಮತ್ತು 22 ರಂದು ಬೆಂಗಳೂರಿನ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಮತ್ತು ಮೋಡ ಕವಿದಿರುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!