ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಗೆ ಇಂದು ವರುಣ ಎಂಟ್ರಿಕೊಂಟಿದ್ದು, ನಗರದಪೀಣ್ಯ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ ಮಲ್ಲಸಂದ್ರ, ಸೇರಿದಂತೆ ಹಲವು ಕಡೆ ಮಳೆ ಆರಂಭವಾಗಿದೆ.
ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲದಲ್ಲೂ ಧಾರಕಾರ ಮಳೆ ಸುರಿಯುತ್ತಿದ್ದು, ಮಳೆಯಿಂದಾಗಿ ವಾಹನ ಸವಾರರಿಗೆ ತೀವ್ರ ಸಂಕಷ್ಟ ಎದುರಾಗಿದೆ.
ಚಿಕ್ಕಬಾಣಾವಾರ ರೈಲ್ವೆ ಅಂಡರ್ ಪಾಸ್ನಲ್ಲಿ ಮಳೆ ನೀರು ತುಂಬಿದೆ. ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವಾರದಲ್ಲಿ ಸತತ ಒಂದು ಗಂಟೆಯಿಂದ ಸುರಿಯುತ್ತಿರುವ ಮಳೆಯಿಂದ ವಾಹನಗಳು ನೀರಲ್ಲೇ ಸಾಗುತ್ತಿವೆ.