ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿ ಬೆಂಗಳೂರಿನ ಕೆಲವೆಡೆ ಸಂಜೆ ವೇಳೆಗೆ ಧಾರಾಕಾರ ಮಳೆಯಾಗಿದೆ. ಮಳೆಯ ಅಬ್ಬರಕ್ಕೆ ಕೆಲವೇ ನಿಮಿಷಕ್ಕೆ ಹೆಬ್ಬಾಳದ ರಸ್ತೆ ಸಂಪೂರ್ಣ ಜಲಾವೃತ ಆಗಿತ್ತು. ಮಳೆಯಿಂದ ಹೆಬ್ಬಾಳದ ರಸ್ತೆಯಲ್ಲಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ಎದುರಾಗಿತ್ತು.
ಸುರಿದ ಭಾರೀ ಮಳೆಗೆ ಯಶವಂತಪುರ, ಹೆಬ್ಬಾಳ ಅಂಡರ್ ಪಾಸ್‌ನಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಕಿ.ಮೀಟರ್ ಗಟ್ಟಲೆ ವಾಹನ ಸವಾರರು ಕ್ಯೂ ನಿಂತಿದ್ರೆ, ಟ್ರಾಫಿಕ್ ಕ್ಲಿಯರ್ ಮಾಡಲು ಸಂಚಾರಿ ಪೊಲೀಸರು ಹರಸಾಹಸಪಟ್ಟಿದ್ದಾರೆ.