ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಷ್ಯಾಕಪ್ ಟೂರ್ನಿಯ ಹೈವೋಲ್ಟೇಜ್ ಪಂದ್ಯ ಭಾರತ ಹಾಗೂ ಪಾಕಿಸ್ತಾನ ನಡೆಯುವೆ ಆರಂಭಗೊಂಡಿದ್ದು, ಇದರ ಬೆನ್ನಲ್ಲೇ ಮಳೆರಾಯ ಅಡ್ಡಿಪಡಿಸಿದ್ದಾನೆ.
ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿರುವ ಭಾರತ 4.2 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 15 ರನ್ ಗಳಿಸಿದ್ದಾಗ ತುಂತುರು ಮಳೆ ಆರಂಭವಾಗಿದೆ. ಹೀಗಾಗಿ ಪಂದ್ಯ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
ಮೊದಲ ಓವರ್‌ನಲ್ಲಿ ಶಾಹೀನ್ ಅಫ್ರಿದಿ ಬೌಲಿಂಗ್‌ನಲ್ಲಿ ರೋಹಿತ್ ಶರ್ಮಾ ಬೌಂಡರಿ ಬಾರಿಸಿದರು. ಇನ್ನು ಎರಡನೇ ಓವರ್‌ನಲ್ಲಿ ನಸೀಂ ಶಾ ಬೌಲಿಂಗ್‌ನಲ್ಲಿ ಟೀಂ ಇಂಡಿಯಾ ಬ್ಯಾಟರ್‌ಗಳು ಕೇವಲ 3 ರನ್ ಗಳಿಸಲಷ್ಟೇ ಶಕ್ತರಾದರು. ಇದಾದ ಬಳಿಕ ಮೂರನೇ ಓವರ್‌ನಲ್ಲಿ ಶಾಹೀನ್ ಅಫ್ರಿದಿಗೆ ರೋಹಿತ್ ಶರ್ಮಾ ಮತ್ತೊಂದು ಬೌಂಡರಿ ಬಾರಿಸಿದರು. ಆದರೆ ನಸೀಂ ಶಾ ಎದುರು 4ನೇ ಓವರ್‌ನಲ್ಲಿ ಟೀಂ ಇಂಡಿಯಾ ಬ್ಯಾಟರ್‌ಗಳು ರನ್ ಗಳಿಸಲು ಪರದಾಡಿದರು.