June 20, 2026
Saturday, June 20, 2026
spot_img

ಬಿಸಿಲಿನ ನಡುವೆಯೇ ವರುಣನ ಗುಡ್ ನ್ಯೂಸ್: ವಾರಪೂರ್ತಿ ಮಳೆಯ ಮುನ್ಸೂಚನೆ; ಹಲವು ಜಿಲ್ಲೆಗಳಿಗೆ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಗಾರು ಮಳೆ ನಿರೀಕ್ಷೆಯಷ್ಟು ಚುರುಕುಗೊಳ್ಳದಿದ್ದರೂ, ರಾಜ್ಯದ ಹಲವೆಡೆ ಮುಂದಿನ ದಿನಗಳಲ್ಲಿ ವರುಣನ ಅಬ್ಬರ ಹೆಚ್ಚಾಗುವ ಲಕ್ಷಣಗಳು ಕಂಡುಬಂದಿವೆ. ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಏರಿಕೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ತಿಳಿಸಿದ್ದು, ಕೆಲವು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 21ರಿಂದ 25ರವರೆಗೆ ಮಳೆಯ ತೀವ್ರತೆ ಹೆಚ್ಚಾಗುವ ನಿರೀಕ್ಷೆ ಇದೆ. ಕೆಲವೆಡೆ ಉತ್ತಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ:

ಒಳನಾಡು ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ

ಜೂನ್ 22 ಮತ್ತು 23ರಂದು ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಮತ್ತು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ರಾಮನಗರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲೂ ಮಳೆಯ ನಿರೀಕ್ಷೆ ಇದೆ.

ಬಿಸಿ ಗಾಳಿಯ ಎಚ್ಚರಿಕೆ

ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯ ಜೊತೆಗೆ ಬಿಸಿ ಹಾಗೂ ತೇವಾಂಶಯುಕ್ತ ಗಾಳಿಯ ಪರಿಣಾಮ ಮುಂದಿನ ಮೂರು ದಿನಗಳವರೆಗೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ಅಧಿಕೃತ ಹವಾಮಾನ ಮಾಹಿತಿಯನ್ನು ಗಮನಿಸುವಂತೆ ಇಲಾಖೆ ಸಲಹೆ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !