ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಕೇರಳ ರಾಜ್ಯದ ಐದು ಜಿಲ್ಲೆಗಳಾದ ಕಾಸರಗೋಡು, ಕಣ್ಣೂರು, ವಯನಾಡ್, ಕೋಝಿಕ್ಕೋಡ್ ಮತ್ತು ಮಲಪ್ಪುರಂನಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು ರೆಡ್ ಅಲರ್ಟ್ ಘೋಷಿಸಿದೆ.
ಪಾಲಕ್ಕಾಡ್, ಎರ್ನಾಕುಲಂ, ತ್ರಿಶೂರ್, ಇಡುಕ್ಕಿ, ಕೊಟ್ಟಾಯಂ ಮತ್ತು ಪಥನಾಂತಿಟ್ಟ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ತಿರುವನಂತಪುರಂ, ಕೊಲ್ಲಂ ಮತ್ತು ಅಲಪ್ಪುಳದಲ್ಲಿ ಹಳದಿ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ 20 ಸೆಂ.ಮೀ.ಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ರೆಡ್ ಅಲರ್ಟ್ ನೀಡಲಾಗಿದ್ದು, 11 ಸೆಂ.ಮೀ.ನಿಂದ 20 ಸೆಂ.ಮೀ.ವರೆಗಿನ ಮಳೆ ಬೀಳುವ ಸಾಧ್ಯತೆ ಇದೆ ಎಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.