ಮುಂದಿನ 24 ಗಂಟೆಯಲ್ಲಿ ವರುಣನ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಮಳೆಯು (Weather Report) ಆಗಮನವಾಗಲಿದೆ ಎಂದು ಹವಾಮಾನ ಇಲಾಖೆ (Weather Updates) ಮುನ್ಸೂಚನೆ ನೀಡಿದೆ.
ಮುಂದಿನ ಎರಡು ದಿನಗಳು ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ (Karnataka Rain) ಆಗಲಿದೆ.

ಏಪ್ರಿಲ್‌ 7 ಮತ್ತು 8ರಂದು ಉತ್ತರ ಒಳನಾಡಿನ ಜಿಲ್ಲೆಗಳಾದ ಗದಗ, ಬೆಳಗಾವಿ, ಕೊಪ್ಪಳ, ಹಾವೇರಿ ಹಾಗೂ ಧಾರವಾಡ, ಕಲಬುರುಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಬಳ್ಳಾರಿ, ತುಮಕೂರು, ಚಾಮರಾಜನಗರ, ಮೈಸೂರು, ದಾವಣಗೆರೆ, ಚಿತ್ರದುರ್ಗದಲ್ಲಿ ಮಳೆ ಅಬ್ಬರಿಸಲಿದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ.

ಮುಂದಿನ 24 ಗಂಟೆಗಳಲ್ಲಿ ಉತ್ತರ ಒಳನಾಡಿನ ವಿಜಯಪುರ, ಕಲಬುರಗಿ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೀದರ್, ಗದಗ, ಕೊಪ್ಪಳ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ತುಮಕೂರು, ಚಾಮರಾಜನಗರ, ಮೈಸೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here