September 27, 2026
Sunday, September 27, 2026
spot_img

ಕರುನಾಡಿನತ್ತ ವರುಣನ ಅಬ್ಬರ: ಕರಾವಳಿಗೆ ಆರೆಂಜ್ ಅಲರ್ಟ್, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ವಾರ್ನಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮುಂಗಾರು ಮತ್ತೆ ವೇಗ ಪಡೆದುಕೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಗೊಳಿಸಿದೆ. ಮುಂದಿನ ಕೆಲವು ದಿನಗಳ ಕಾಲ ಮಳೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ. ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಬಳ್ಳಾರಿ, ವಿಜಯನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿಯಲ್ಲಿ ಸಂಜೆ ಮತ್ತು ರಾತ್ರಿ ವೇಳೆಗೆ ಉತ್ತಮ ಮಳೆಯ ನಿರೀಕ್ಷೆಯಿದೆ.

ಇದನ್ನೂ ಓದಿ:

ಮಳೆಯ ಪರಿಣಾಮ ಹೆಚ್ಚಳ

ಶಿರಸಿ–ಕುಮಟಾ ರಾಷ್ಟ್ರೀಯ ಹೆದ್ದಾರಿಯ ದೇವಿಮನೆ ಘಟ್ಟದಲ್ಲಿ ಭೂಕುಸಿತ ಸಂಭವಿಸಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಅಧಿಕಾರಿಗಳು ಮಣ್ಣು ತೆರವುಗೊಳಿಸಿದರೂ ಮುನ್ನೆಚ್ಚರಿಕೆ ಕ್ರಮವಾಗಿ ಕೆಲ ಭಾಗಗಳಲ್ಲಿ ಸಂಚಾರವನ್ನು ನಿಯಂತ್ರಿಸಲಾಗಿದೆ. ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಜನರು ಅನಗತ್ಯ ಪ್ರಯಾಣ ತಪ್ಪಿಸಿ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ.

Must Read