ಹೊಸದಿಗಂತ ಚಿಕ್ಕಮಗಳೂರು:
ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ರಾಜ್ಯದ ಕೆಲವೆಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಜೂನ್ 27 ರಂದು ಜಿಲ್ಲೆಯ 5 ತಾಲೂಕುಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಚಿಕ್ಕಮಗಳೂರಿನಲ್ಲಿ ಗಾಳಿ ಸಹಿತ ಭಾರೀ ಮಳೆ ಹಿನ್ನೆಲೆ ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಹಾಗೂ ಕಳಸ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.