ಕರಾವಳಿಯಲ್ಲಿ ವರುಣನ ಆರ್ಭಟ: ಈ ಎರಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರಾವಳಿಯಲ್ಲಿ ವಿವಿಧ ಭಾಗಗಳಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಹಲವೆಡೆ ಪ್ರವಾಹದ ಸನ್ನಿವೇಶ ಸೃಷ್ಟಿಯಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಜು.15 ರಂದು ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಉಭಯ ಜಿಲ್ಲೆಗಳಲ್ಲಿ ನಾಳೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನು ಜು.16 ರಿಂದ 18ರವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯಾದ್ಯಂತ ಭಾನುವಾರವೂ ಉತ್ತಮ ಮಳೆ ಮುಂದುವರೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!